Monday, July 1, 2024

IND vs SA final: ನಾಳೆ ಭಾರತ- ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ ಅಂತಿಮ ಹಣಾಹಣಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್‌ ಕ್ರಿಕೆಟ್‌ 2024 ಫೈನಲ್‌ ಜೂನ್‌ 29, 2024ರಂದು ಕೆನ್ಸಿಂಗ್ಟನ್ ಓವಲ್ ಬಾರ್ಬಡೋಸ್‌ನಲ್ಲಿ ರಾತ್ರಿ 8 ಗಂಟೆಗೆ ನಡೆಯಲಿದೆ. ಎರಡನೇ ಬಾರಿ ಫೈನಲ್‌ ಗೆಲ್ಲುವ ಅವಕಾಶ ಭಾರತಕ್ಕಿದೆ.

ರೋಚಕ ಪಂದ್ಯದಲ್ಲಿ ಟೀಮ್‌ ಇಂಡಿಯಾ ಇಂಗ್ಲೆಂಡ್‌ ಅನ್ನು ಮಣಿಸಿ ಟಿ20 ವಿಶ್ವಕಪ್‌ 2024ರ ಫೈನಲ್‌ ಪ್ರವೇಶಿಸಿದೆ. ಟಿ20 ವಿಶ್ವಕಪ್‌ ಫೈನಲ್‌ಗೆ ಭಾರತ ಪ್ರವೇಶಿಸುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮುನ್ನ 2007ರಲ್ಲಿ ಮತ್ತು 2014ರಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸಿತ್ತು. ಫೈನಲ್‌ನಲ್ಲಿ ಗೆದ್ದದ್ದು ಮಾತ್ರ ಒಂದೇ ಬಾರಿ.

ಇದನ್ನೂ ಓದಿ: ಜಾರ್ಖಂಡ್​ ಮಾಜಿ ಸಿಎಂ ಹೇಮಂತ್​​​ ಸೊರೇನ್​​ಗೆ ಜಾಮೀನು ಮಂಜೂರು!

ಇಂಗ್ಲೆಂಡ್‌ ವಿರುದ್ಧ ಗೆದ್ದ ಭಾರತಕ್ಕೆ ನಾಳೆ ದಕ್ಷಿಣ ಆಫ್ರಿಕಾ ಎದುರಾಳಿ. ನಾಳೆ ಗೆದ್ದರೆ ಭಾರತ ಎರಡನೇ ಬಾರಿ ಟಿ20 ವಿಶ್ವಕಪ್​​​ 2024ರ ಫೈನಲ್‌ ಗೆದ್ದ ಹಿರಿಮೆಗೆ ಪಾತ್ರವಾಗಲಿದೆ. ನಾಳೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ.

ಟೀಮ್‌ ಇಂಡಿಯಾದ ಪರ್ಫಾಮೆನ್ಸ್‌ ನೋಡಲು ಭಾರತದ ಕ್ರಿಕೆಟ್‌ ಪ್ರೇಮಿಗಳು ಕಾತರರಾಗಿದ್ದಾರೆ. ಈ ವೀಕೆಂಡ್‌ಗೆ ಕ್ರಿಕೆಟ್‌ ಪ್ರೇಮಿಗಳಿಗೆ ಹಬ್ಬವಾಗುವುದೇ ಕಾದು ನೋಡಬೇಕಿದೆ. ಈಗಾಗಲೇ ಒಂದು ಬಾರಿ ಟಿ20 ವಿಶ್ವಕಪ್‌ ಗೆದ್ದಿರುವ ಭಾರತ ಈ ಬಾರಿಯೂ ಗೆಲ್ಲಲಿದೆ ಎಂದು ಟೀಮ್‌ ಇಂಡಿಯಾ ಫ್ಯಾನ್ಸ್‌ ನಿರೀಕ್ಷೆ ಹೊಂದಿದ್ದಾರೆ.

RELATED ARTICLES

Related Articles

TRENDING ARTICLES