Monday, July 1, 2024

ಬಳ್ಳಾರಿ ಜಿಲ್ಲಾ ನೂತನ ಉಸ್ತುವಾರಿಯಾಗಿ ಸಚಿವ ಜಮೀರ್ ಅಹ್ಮದ್​ ನೇಮಕ

ಬಳ್ಳಾರಿ: ಬಳ್ಳಾರಿಯ ಜಿಲ್ಲಾ ನೂತನ ಉಸ್ತುವಾರಿಯಾಗಿ ಸಚಿವ ಬಿ.ಜೆಡ್​ ಜಮೀರ್ ಅಹ್ಮದ್​ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಮಾಜಿ ಕ್ರೀಡಾ ಸಚಿವ ಬಿ.ನಾಗೇಂದ್ರ ಅವರ ರಾಜಿನಾಮೆಯಿಂದ ತೆರವಾಗಿದ್ದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೆಚ್ಚುವರಿಯಾಗಿ ಜವಾಬ್ದಾರಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ಚಂದ್ರಶೇಖರ ಸ್ವಾಮೀಜಿ ಬಗ್ಗೆ ಅವಹೇಳನ: ಸಚಿವ ಕೆ.ಎನ್​ ರಾಜಣ್ಣ ವಿರುದ್ದ ಒಕ್ಕಲಿಗರ ಸಂಘ ಆಕ್ರೋಶ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ಬಿ,ನಾಗೇಂದ್ರ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಪ್ರಕರಣ ಇತ್ಯರ್ಥವಾಗುವವರೆಗೂ ಸಚಿವ ಸ್ಥಾನದಿಂದ ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆಯಿಂದ ತೆರವಾಗಿರುವ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜಮೀರ್​ ಹೆಗಲಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES