Sunday, September 8, 2024

ಅರವಿಂದ ಕೇಜ್ರವಾಲ್ ಬಂಧನ ಖಂಡಿಸಿ BJP ಕಚೇರಿ ಮುತ್ತಿಗೆಗೆ AAP ನಿರ್ಧಾರ

ದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಬಂಧನ ಖಂಡಿಸಿ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಎಎಪಿ ನಿರ್ಧರಿಸಿದೆ. ಆದರೆ ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

‘ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿಲ್ಲ. ಪ್ರತಿಭಟನಾಕಾರರನ್ನು ತಡೆಯಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಅರೆಸೇನಾ ಪಡೆಯ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮಾನ್ಸೂನ್ ಮಳೆಗೆ ರಾಷ್ಟ್ರ ರಾಜಧಾನಿ ತತ್ತರ

ಬಿಜೆಪಿ ಕಚೇರಿ ಇರುವ ದೀನ್ ದಯಾಳ್ ಉಪಾಧ್ಯಾಯ ರಸ್ತೆಯಲ್ಲಿ ಈಗಾಗಲೇ ಸಿಆರ್‌ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿ ಇದ್ದು, ಅಗತ್ಯ ಬಿದ್ದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗುವುದು ಎಂದೂ ಅವರು ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ ಕೇಜ್ರವಾಲ್ ಅವರನ್ನು ಇ.ಡಿ ಹಾಗೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

RELATED ARTICLES

Related Articles

TRENDING ARTICLES