Friday, July 5, 2024

ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು: ಪರಂ

ಬೆಂಗಳೂರು: ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು. ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆಗಳ ವಿಚಾರ ಪ್ರಸ್ತುತ ಅಪ್ರಸ್ತುತ ಅಂತ ಅಲ್ಲ. ಹೈಕಮಾಂಡ್ ನವರು ಆ ರೀತಿ ಬದಲಾವಣೆ ಮಾಡುವುದಾದರೆ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಪಡೆಯುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್, ಬಾಯಿಗೆ ಬೀಗ ಹಾಕೊಂಡಿರಿ: ಡಿಕೆಶಿ ಖಡಕ್ ಎಚ್ಚರಿಕೆ

ನಾವು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದ್ದೆವು. ರಾಜಕೀಯವಾಗಿ ಚರ್ಚೆ ಮಾಡಲಾಯಿತು. ಸೌಹಾರ್ದಯುತವಾಗಿ ಚರ್ಚೆ ಮಾಡಲಾಯ್ತು. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಪ್ರಸ್ತಾಪ ಮಾಡಲಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಅವರವರು ಅವರವರ ಅಭಿಪ್ರಾಯ ಹೇಳ್ತಾರೆ. ಆದರೆ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES