Thursday, July 4, 2024

ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಎಲ್ಲೆಡೆಯಿಂದ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ.

ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದರೆ, ಇತ್ತ ಟೀಮ್‌ ಇಂಡಿಯಾ ಜಯ ಗಳಿಸುತ್ತಿದ್ದಂತೆ ಅಭಿನಂದನೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಂಡದ ಸದಸ್ಯರಿಗೆ ಕರೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡರು.

ಇದನ್ನೂ ಓದಿ: T20 World Cup: ಗೆಲುವಿನ ಸವಿ ನೆನೆಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್

ಇದೇ ವೇಳೆ, ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆಯಲಿಲ್ಲ.

ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದರು. ತಡರಾತ್ರಿ ಭಾರತ ಪಂದ್ಯವನ್ನು ಗೆದ್ದ ನಂತರ, ಪ್ರಧಾನಿ ‘ಮೆನ್ ಇನ್ ಬ್ಲೂ’ಗೆ ಅಭಿನಂದನಾ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿ ಭಾರತೀಯ ಕ್ರಿಕೆಟಿಗರು ಕೋಟ್ಯಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.

ಚಾಂಪಿಯನ್ಸ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಬರೆದುಕೊಂಡು ಅವರು ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿದಿರುವುದು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಕಳೆದ ವರ್ಷದ ಏಕದಿನ ವಿಶ್ವಕಪ್‌ ಪಂದ್ಯದ ಫೈನಲ್‌ನಲ್ಲಿ ಭಾರತ ತಂಡ ಸೋತಾಗ ಮೋದಿ ಅವರು ಸಾಂತ್ವನ ಹೇಳಿದ್ದರು.

RELATED ARTICLES

Related Articles

TRENDING ARTICLES