Tuesday, July 2, 2024

T20 World Cup: ಗೆಲುವಿನ ಸವಿ ನೆನೆಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್

ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು. ಈ ಗೆಲುವಿನ ಬಳಿಕ ತಂಡದ ನಾಯಕ ರೋಹಿತ್ ಶರ್ಮ ಅವರು ಪಿಚ್​ನ ಒಂದು ಚಿಟಿಕೆ ಮಣ್ಣು ಬಾಯಿಗೆ ಹಾಕಿದ್ದಾರೆ. ಈ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

ಫುಟ್ಬಾಲ್​, ಟೆನಿಸ್​ ಸೇರಿ ಹೊರಾಂಗಣ ಕ್ರೀಡೆಯಲ್ಲಿಯಲ್ಲಿ ಚಾಂಪಿಯನ್​ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆಡರು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವುವನ್ನು ಮತ್ತು ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್​ ಕೂಡ ಕಪ್​ ಗೆದ್ದ ಬಳಿಕ ಪಿಚ್​ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.

ಇದನ್ನೂ ಓದಿ: ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಾರಿಯರ ದಾಖಲೆಗಳ ಸುರಿಮಳೆ.. ಇನ್ನಿಂಗ್ಸ್​​ನಲ್ಲಿ 600 ಪ್ಲಸ್ ರನ್

ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಯಕನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

RELATED ARTICLES

Related Articles

TRENDING ARTICLES