Tuesday, July 2, 2024

ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಮೈಸೂರು: ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್​ವೊಂದು ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಪರಿಣಾಮ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಂಜನಗೂಡಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ.

ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಇದರಿಂದ ಬಸ್​ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ ಫಸ್ಟ್‌ ರಿಯಾಕ್ಷನ್

ಉಳಿದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 346 ನಂಬರ್ ಇರುವ ಸಾರಿಗೆ ಬಸ್ ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ವರುಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES