Thursday, December 5, 2024

ಹಾಸನ SP ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಪತಿ

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲೇ ಇರಿದು ಕೊಂದುಹಾಕಿದ ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

RELATED ARTICLES

Related Articles

TRENDING ARTICLES