Thursday, December 5, 2024

AK47 ಹಿಡ್ಕೊಂಡು ಸುಂದರಿಯರ ಜೊತೆ ರೀಲ್ಸ್‌; ಶೋಕಿವಾಲಾ ಜೈಲುಪಾಲು

ಬೆಂಗಳೂರು: ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದವ ಇದೀಗ ಜೈಲು ಸೇರಿದ್ದಾನೆ. ಈ ವ್ತಕ್ತಿಯ ಹೆಸರು ಅರುಣ್ ಕಟಾರೆ ಅಂತ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಅಲ್ಲದೇ ಬೀದಿಬೀದಿಯಲ್ಲಿ ಗನ್‌ ತೋರಿಸಿಕೊಂಡು ರೀಲ್ಸ್​​ಗಾಗಿ ಶೋಕಿ ಮಾಡಿದವನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ.

ಅರುಣ್ ಕಟಾರೆ ಮೈಮೇಲೆ ಕೆಜಿಗಟ್ಟಲೇ ಚಿನ್ನ ಗಾಕಿಕೊಂಡು, ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಈತನ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಕೊತ್ತನೂರು ಪೊಲೀಸರು, ಅರುಣ್ ಕಟಾರೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು. ಆದ್ರೆ, ಈತ ಹಿಡಿದುಕೊಂಡು ಓಡಾಡಿರುವುದು ನಕಲಿ ಗನ್​ ಎನ್ನುವುದು ವಿಚಾರಣೆ ವೇಳೆ ಗೊತ್ತಾಗಿದೆ. ಆದರೂ ನಕಲಿ ಗನ್ ಹಿಡಿದು ಏರಿಯಾದಲ್ಲಿ ಆತಂಕ ಸೃಷ್ಟಿಸಿದಕ್ಕೆ ಕೇಸ್ ದಾಖಲು ಕೊತ್ತನೂರು ಪೊಲೀಸರು, ಆರ್ಮ್ಸ್ ಆಕ್ಟ್, IPC ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES