Wednesday, January 22, 2025

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ

ಬೀದರ್​​ ಜಿಲ್ಲೆಯಲ್ಲಿ ಒಂದು ಬೆಚ್ಚಿಬೀಳುವ ಘಟನೆ ನಡೆದಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ. ರಾತ್ರಿ ವೇಳೆ ಮಣ್ಣಲ್ಲಿ ಹೂತಿದ್ದ ಮಗು ಬೆಳಗಾಗುವಷ್ಟರಲ್ಲಿ ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಜರುಗಿದೆ.

ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಅವರ ಒಂದೂವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿತ್ತು. ನಂತರ ತಡರಾತ್ರಿ 12ರ ಸುಮಾರಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಕೂಡಿ ಮಗುವಿಗೆ ಗ್ರಾಮದ ಪಕ್ಕದ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಮನೆಗೆ ತೆರಳಿದ್ದರು. ಆದರೆ ಮಾರನೇ ದಿನ ಬೆಳಗ್ಗೆ ಜನರಿಗೆ ಆಶ್ಚರ್ಯ ಕಾದಿತ್ತು.

ಮಾಟ ಮಂತ್ರ ಮಾಡುವ ಮಾಂತ್ರಿಕರು ಮಗುವನ್ನು ಮೇಲೆ ತೆಗೆದಿರಬಹುದು ಎಂದು ಕೆಲವರು ಹೇಳಿದರೆ, ಮಗುವಿನ ಮೇಲೆನ ಆಭರಣಗಳನ್ನು ದೋಚುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES