Thursday, July 4, 2024

MUDA Site Scandal : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ: ಹೆಚ್.ಡಿ ರೇವಣ್ಣ

ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.

ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

RELATED ARTICLES

Related Articles

TRENDING ARTICLES