Thursday, July 4, 2024

ರೈಲಿಗೆ ತಲೆಕೊಟ್ಟು ಸರ್ಕಲ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆ

ಕಲಬುರಗಿ: ರೈಲಿಗೆ ತಲೆಕೊಟ್ಟು ಸರ್ಕಲ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ರೈಲ್ವೆ ಹಳಿ ಮೇಲೆ ನಡೆದಿದೆ.

ಬಾಪುಗೌಡ (45) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ, ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವೈಯರಲೆಸ್ ವಿಭಾಗದಲ್ಲಿ ಸರ್ಕಲ್​ ಇನ್ಸ್​ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ:  ಖೈದಿ‌ ನಂ 6106ನಲ್ಲಿ ಮೂಡಿ ಬಂದ ದರ್ಶನ್ ಫೋಟೋ

ಕೆಲ ದಿನಗಳಿಂದ ಮೌತ್ ಕ್ಯಾನ್ಸರ್‌ನಿಂದ ಬಾಪುಗೌಡ ಬಳಲುತ್ತಿದ್ದರು, ಈ ಕ್ಯಾನ್ಸರ್ ಕಾಯಿಲೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಇದೇ ಕಾರಣಕ್ಕೆ ಬಾಪುಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದೂ, ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES