Thursday, July 4, 2024

ಡೆಂಗ್ಯೂ ಉಲ್ಬಣ: ಬೆಂಗಳೂರಿನ ಎಲ್ಲಾ ಮನೆಗಳ ಸರ್ವೇಗೆ -ಸಚಿವ ದಿನೇಶ್ ಗುಂಡೂರಾವ್​​​ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ ಆಗುತ್ತಿದ್ದು, ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ‘ಡೆಂಗ್ಯೂ ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ್ದು, ಅದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ ಎಂದರು.

ಸದಾ ಮಳೆ ಬರುತ್ತಿದ್ದರೆ, ಡೆಂಗ್ಯೂ ಸೊಳ್ಳೆ ಬರೋದಿಲ್ಲ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುವುದಕ್ಕೆ ಇದು ಅನುಕೂಲ ಮಾಡಿಕೊಡುತ್ತದೆ. ಈ ರೀತಿಯ ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿ ಮತ್ತಷ್ಟು ಕೇಸ್​ಗಳು ಇರಬಹುದು, ಈ ಕುರಿತು ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ.

ಇದನ್ನೂ ಓದಿ: KMF ಸಾಧನೆ ಹಾಡಿಹೊಗಳಿದ ಸಿಎಂ ಸಿದ್ದರಾಮಯ್ಯ

ಅದರಂತೆ ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಈ ವಿಚಾರದಲ್ಲಿ ಫೀಲ್ಡ್ ನಲ್ಲಿ ಇದ್ದು, ಮನೆ ಮನೆ ಸಮೀಕ್ಷೆ ನಡೆಸಿ ಮಾನಿಟರ್ ಮಾಡಲು ಸೂಚಿಸಿದ್ದೇನೆ. ಜನವರಿಯಿಂದ ಜುಲೈ 1 ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. 2903 ಕಳೆದ ವರ್ಷ ದಾಖಲಾಗಿತ್ತು. ಈ ವರ್ಷ 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಇನ್ನೂ ಡೆಂಘಿ ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ಸಿಎಂ ಕೂಡ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ ಎಂದರು.

ಇನ್ನು NS1 ಕಿಟ್ ಗಳನ್ನು ಖರೀದಿಸಲಾಗಿದೆ. ಡೆಂಗ್ಯೂಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ, ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಬ್ಲಡ್ ಯೂನಿಟ್ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್​ಗಳನ್ನು ಕೊಡಲಾಗುತ್ತದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ. ಜೊತೆಗೆ ಈ ಕುರಿತು ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ ಅವರಿಗೂ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಹೇಳಿದರು.

RELATED ARTICLES

Related Articles

TRENDING ARTICLES