Thursday, July 4, 2024

RCB ತಂಡಕ್ಕೆ ಕ್ಯಾಪ್ಟನ್ ಆಗ್ತಾರಾ ವಿರಾಟ್ ಕೊಹ್ಲಿ..?

ಬೆಂಗಳೂರು: ಕಳೆದ 17 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್​ಸಿಬಿ ಫೈನಲ್​ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.

ಅದರಲ್ಲೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದ ನಾಯಕತ್ವ ಬದಲಾಗುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಇದನ್ನೂ ಓದಿ: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್​ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್​ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.

ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್​ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES