Saturday, July 6, 2024

ಅಸ್ಸಾಂನಲ್ಲಿ ಮುಂದುವರೆದ ಪ್ರವಾಹ; 11 ಲಕ್ಷಕ್ಕೂ ಹೆಚ್ಚು ಜನರಿಗೆ ತೊಂದರೆ

ಅಸ್ಸಾಂನಲ್ಲಿ ಬ್ರಹ್ಮಪುತ್ರ ಮತ್ತು ಅದರ ಉಪನದಿಗಳು ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ 23 ಜಿಲ್ಲೆಗಳಲ್ಲಿ 11.50 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಮೋರಿಗಾಂವ್‌, ನಾಗಾಂವ್, ಚಿರಾಂಗ್, ಕ್ಯಾಚಾರ್, ದರ್ರಾಂಗ್, ದಿಬ್ರುಗಢ, ಗೋಲಾಘಾಟ್, ಕರೀಮ್‌ಗಂಜ್, ಲಖಿಂಪುರ, ನಲ್ಪರಿ, ಶಿವಸಾಗರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಪ್ರವಾಹದ ಸ್ಥಿತಿ ಉಂಟಾಗಿದೆ. ಪ್ರಸಕ್ತ ವರ್ಷ ಪ್ರವಾಹ, ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾವಿನ ಸತ್ಸಂಗ..! ಯಾರು ಈ ಭೋಲೆ ಬಾಬಾ?

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಗೋಲಾಘಾಟ್ ಜಿಲ್ಲೆಗೆ ಭೇಟಿ ನೀಡಿ, ಪ್ರವಾಹ ಪೀಡಿತ ಪ್ರದೇಶಗಳನ್ನು ಬಗ್ಗೆ ಪರಿಶೀಲಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶರ್ಮಾ ಅವರು ಇಂದು ಸಂಪುಟ ಸಭೆ ನಡೆಸಲಿದ್ದು, ವಿವಿಧ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಕುರಿತು ಅವಲೋಕನ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES