Friday, July 5, 2024

ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ: ಸಂಜಯ್ ಮಂಜ್ರೇಕರ್

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಇನಿಂಗ್ಸ್​ನ ಹೊರತಾಗಿಯೂ ಫೈನಲ್ ಪಂದ್ಯದಲ್ಲಿ ಬೌಲರ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

ನನ್ನ ಪ್ರಕಾರ, ಅಂತಿಮ ಪಂದ್ಯದಲ್ಲಿ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್​ ಅವಾರ್ಡ್​ಗೆ ಅರ್ಹರಾಗಿರಲಿಲ್ಲ. ಇದಾಗ್ಯೂ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆದರೆ ಈ ಪಂದ್ಯದಲ್ಲಿ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಪ್ರಶಸ್ತಿ ಬೌಲರ್​​ಗೆ ಸಲ್ಲಬೇಕಿತ್ತು ಎಂದು ಮಂಜ್ರೇಕರ್ ಹೇಳಿದ್ದಾರೆ.

ಇದನ್ನೂ ಓದಿ:  RCB ತಂಡಕ್ಕೆ ಕ್ಯಾಪ್ಟನ್ ಆಗ್ತಾರಾ ವಿರಾಟ್ ಕೊಹ್ಲಿ..?

ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸೋಲಿನತ್ತ ಮುಖಾಮುಖ ಮಾಡಿತ್ತು. ಇದಾಗ್ಯೂ ಭಾರತೀಯ ಬೌಲರ್​ಗಳು ಅಂತಿಮ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ಸೋಲಿನ ದವಡೆಯಿಂದ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟರು. ಇಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ಗಿಂತ, ಭಾರತೀಯ ಬೌಲರ್​ಗಳ ಪ್ರದರ್ಶನ ಮೇಲ್ಮಟ್ಟದಲ್ಲಿದೆ. ಹೀಗಾಗಿ ಬೌಲರ್​ಗಳು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಹಾರ್ದಿಕ್ ಪಾಂಡ್ಯ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ನಿರ್ಣಾಯಕ ವಿಕೆಟ್‌ಗಳನ್ನು ಪಡೆದಿದ್ದರು. ಹಾಗೆಯೇ ಜಸ್​ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಲಾ ಎರಡು ವಿಕೆಟ್ ಕಬಳಿಸಿದ್ದರು. ಹೀಗಾಗಿ ಇವರಲ್ಲಿ ಒಬ್ಬರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ.

ಇದೀಗ ಸಂಜಯ್ ಸಂಜ್ರೇಕರ್ ಅವರ ಈ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ್ದರಿಂದ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಪೇರಿಸುವಂತಾಯಿತು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES