Saturday, July 6, 2024

ಸೂರಜ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ!

ಬೆಂಗಳೂರು: ಸಲಿಂಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸೂರಜ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈಗಾಗಲೇ ಅವರ ಸಹೋದರ ಪ್ರಜ್ವಲ್ ಸಹ ಇದೇ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ಮಗ ಪ್ರಜ್ವಲ್​ನನ್ನು ಭೇಟಿಯಾಗಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಬಳಿಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅದರಂತೆ ಇಂದು ಕಸ್ಟಡಿ ಮುಗಿದಿದ್ದರಿಂದ ಸೂರಜ್​ನನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

RELATED ARTICLES

Related Articles

TRENDING ARTICLES