ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯು ಜ್ವರ ವ್ಯಾಪಕವಾಗಿದ್ದು, ಮೊದಲ ಬಲಿ ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489 ಪರೀಕ್ಷೆ ನಡೆಸಲಾಗಿದ್ದು, 479 ಡೆಂಗ್ಯು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 162 ಆ್ಯಕ್ಟೀವ್ ಪ್ರಕರಣಗಳಿವೆ.
ಇದನ್ನೂ ಓದಿ: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ
ಡೆಂಗ್ಯು ಜ್ವರದಿಂದ ಇದುವರೆಗೆ ರಾಜ್ಯದಲ್ಲಿ 6 ಮಂದಿ ಸತ್ತಿದ್ದಾರೆ ಎಂದು ಮಂಗಳವಾರ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ನಿನ್ನೆ ಹಾಸನ ಜಿಲ್ಲೆಯಲ್ಲಿ ಒಬ್ಬಳು ಬಾಲಕಿ ಡೆಂಗ್ಯುವಿನಿಂದ ಮೃತಪಟ್ಟಿದ್ದು, ಡೆಂಗ್ಯು ಖಚಿತವಾಗಬೇಕಿದೆ. ಬೆಂಗಳೂರಿನಲ್ಲಿ ಒಬ್ಬರು ಡೆಂಗ್ಯುವಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೂ 7 ಮಂದಿ ಡೆಂಗ್ಯುವಿಗೆ ಬಲಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.