Monday, July 8, 2024

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- BBMP ಆಯುಕ್ತ ಎಚ್ಚರಿಕೆ

ಬೆಂಗಳೂರು; ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು.

ಇದನ್ನು ಓದಿ; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ: ಹೆಚ್​ಡಿಕೆ ಗಂಭೀರ ಆರೋಪ

ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗಿದೆ. ನಾಲ್ಕೈದು ದಿನಗಳಿಗೆ ನೀರು ಬದಲಾಯಿಸಬೇಕು. ರೈಟ್ ಅಪ್ ಕೊಡಿ ಅಂದಿದ್ದಾರೆ. ಆರ್‍ಡಬ್ಲ್ಯೂಎಸ್‍ಗೆ ಸಾಫ್ಟ್ ಕಾಪಿ ಕಳುಹಿಸಿದ್ದೀವಿ. ಆಶಾ ಕಾರ್ಯಕರ್ತರು ಬಂದಾಗ ಆರ್ ಡಬ್ಲ್ಯೂಡಿ ಅಂದರೆ ಅಪಾರ್ಟ್‍ಮೆಂಟ್ ನಿವಾಸಿಗಳು ಸ್ಪಂದಿಸಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES