Monday, July 8, 2024

ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣಿಗೆ ಶರಣು

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ.

ಪೂಜಾ (22)ವರ್ಷ, ನೇಣಿಗೆ ಶರಣಾದ ನತದೃಷ್ಟೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗ ಕತ್ತರಿಸಿದ ವೈದ್ಯ!

ಮೂಲತಃ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರ ಮೂಲದ ಪೂಜಾಳನ್ನು 2022 ರಲ್ಲಿ ಸುನೀಲ್​ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು, ಮನೆಯಲ್ಲಿ ವರದಕ್ಷಿಣೆ ಕಿರುಕುಳ ಹೆಚ್ಚಿದ ಹಿನ್ನೆಲೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೃತಳ ಪೋಷಕರು, ಪೂಜಾ ಪತಿ ಸುನೀಲ್​ ಹಾಗು ಮೈದುನನ ವಿರುದ್ದ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗಂಗಮ್ಮನಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎಂ.ಎಸ್​ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ.

RELATED ARTICLES

Related Articles

TRENDING ARTICLES