Monday, July 8, 2024

ಜುಲೈ 6ರಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ಸೇವೆ; ಪ್ರಯಾಣಿಕರಿಗೆ ಗುಡ್ ನ್ಯೂಸ್

ಪ್ರಯಾಣಿಕರ ಒತ್ತಾಯದ ಮೇರೆಗೆ ಜುಲೈ 06ರಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಿದೆ. ಆ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ BMRCL​ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ನಾಳೆಯಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಜುಲೈ 6 ರಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಿರ್ವಹಿಸಲಿವೆ. ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ BMRCL​ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಜುಲೈ 6ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಸಂಚರಿಸಲಿವೆ ಎಂದು BMRCL​ ತಿಳಿಸಿದೆ.

 

RELATED ARTICLES

Related Articles

TRENDING ARTICLES