Monday, July 8, 2024

ಕುಮಾರಸ್ವಾಮಿ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರು: ಹೆಚ್​ಡಿಕೆಗೆ ಇರಿಸುಮುರಿಸು

ಮಂಡ್ಯ: ಮಂಡ್ಯದಲ್ಲಿ ಇಂದು ಕೇಂದ್ರದ ಬೃಹತ್​ ಕೈಗಾರಿಕೆ ಹಾಗು ಉಕ್ಕು ಸಚಿವ ಹೆಚ್ಡಿ.ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ.

ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್​ಡಿ ಕುಮಾರಸ್ವಾಮಿ, “ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ ದರ್ಶನ ಕಾರ್ಯಕ್ರಮ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ನೀಡಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಡಿಮಿಡಿಗೊಂಡರು.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿ ನಾನೇ- ಸಿ.ಪಿ ಯೋಗೇಶ್ವರ್​

ಜನತಾ ದರ್ಶನ ನಡೆಸುವ ಸಂಬಂಧ ಈ ಮೊದಲೇ ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಆದರೂ ಜನತಾ ದರ್ಶನಕ್ಕೆ ಅಧಿಕಾರಿಗಳು ಆಗಮಿಸಿಲ್ಲ, ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಿದ್ದು ಸಚಿವರಿಗೆಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ.

ಡಿ.ಕೆ.ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜನಸ್ಪಂದನ ಹೆಸರಲ್ಲಿ ಅಧಿಕಾರಿಗಳನ್ನ ಹಳ್ಳಿಹಳ್ಳಿ‌ ತಿರುಗಿಸಿದರು. ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನು ಡಿಕೆ ಸುರೇಶ್​ ಮಾಡಿದರು. ಅದಕ್ಕೆ ಅನುಮತಿ ಕೊಟ್ಟವರು ಯಾರು? ಆ ಸಂದರ್ಭದಲ್ಲಿ ಯಾವ ನಿಯಮ ಇತ್ತು? ಇವತ್ತು ಕೇಂದ್ರದ ಒಬ್ಬ ಮಂತ್ರಿ ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ, ಹೊಸ ನಿಯಾಮವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ವಾಗ್ದಾಳಿ ಮಾಡಿದರು.

RELATED ARTICLES

Related Articles

TRENDING ARTICLES