Monday, July 8, 2024

ಗ್ಯಾರಂಟಿ ಯೋಜನೆಗಳಿಗೆ SC-ST ಹಣ ಬಳಕೆ ; ‘ಗ್ಯಾರಂಟಿ’ ಗುನ್ನಾ!

ಬೆಂಗಳೂರು: ಗ್ಯಾರಂಟಿ ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಇನ್ನೊಂದು ಮಾರ್ಗವನ್ನು ಕಂಡುಕೊಂಡಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಸರ್ಕಾರ ಸಜ್ಜಾಗಿದೆ ಎನ್ನಲಾಗಿದೆ. ಸರ್ಕಾರ ಈಗ SCSP ಮತ್ತು TSPಗೆ ಬಜೆಟ್‌ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ14,282 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಅನುಮತಿ ನೀಡಿದೆ

2024-25ನೇ ಆರ್ಥಿಕ ವರ್ಷದಲ್ಲಿ SCSP ಮತ್ತು TSP ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿ ನಾನೇ- ಸಿ.ಪಿ ಯೋಗೇಶ್ವರ್​

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುದಾನ ವರ್ಗಾವಣೆಗೆ ತೀರ್ಮಾನ ಕೈಗೊಂಡು ಅನುಮತಿ ನೀಡಲಾಗಿದೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಅನುದಾನಲ್ಲಿ ಅದೇ ವರ್ಗದ ಗ್ಯಾರಂಟಿ ಫಲಾನುಭವಿಗಳಿಗೆ ಮಾತ್ರ ಹಣವನ್ನು ಬಳಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಮೂಲಕ ಆರ್ಥಿಕ ಹೊರೆಯನ್ನ ಕಡಿಮೆ ಮಾಡಿಕೊಳ್ಳಲು ಸರ್ಕಾರ ತಂತ್ರ ಮಾಡಿದೆ.

RELATED ARTICLES

Related Articles

TRENDING ARTICLES