Thursday, September 19, 2024

ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಕೃಷಿ ಪಂಪ್‌ಸೆಟ್‌ಗಳ ಆರ್.ಆ‌ರ್.ಸಂಖ್ಯೆಯನ್ನು ಗ್ರಾಹಕರ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ವಿದ್ಯುತ್ ಸರಬರಾಜು ಕಂಪೆನಿಗಳು ಸದ್ದಿಲ್ಲದೆ ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆಧಾ‌ರ್-ಸಂಖ್ಯೆಗೆ ಹೊಂದಾಣಿಕೆ ಆಗದಿರುವುದು ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಗ್ಯಾರಂಟಿ ಯೋಜನೆಗಳ ಸಹಿತ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳಿಗೆ ಈಗಾಗಲೇ ಆಧಾರ್ ಸಂಖ್ಯೆ ಜೋಡಣೆ ಮಾಡಲಾಗಿದೆ.

ಇದನ್ನು ಓದಿ; BSP ಅಧ್ಯಕ್ಷನ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ರಾಹುಲ್‌ ಗಾಂಧಿ

ಮುಂದುವರಿದ ಭಾಗವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 2024- 25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್‌ಸೆಟ್‌ಗಳ ಆರ್.ಆ‌ರ್. ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿದ್ದು, ಈ ಸಂಬಂಧ ಎಸ್ಕಾಂಗಳಿಗೆ ಸೂಚನೆ ನೀಡಿತ್ತು. ಅದರಂತೆ 10 ಎಚ್‌ಪಿ ಸಾಮರ್ಥ್ಯದ ವರೆಗಿನ ಪಂಪ್‌ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಆದರೆ ಹೀಗೆ ಸಂಗ್ರಹಿಸಲಾದ ಬಹುತೇಕ ಆರ್.ಆರ್.ಸಂಖ್ಯೆಗಳಿಗೆ ಮತ್ತು ಆಧಾರ್ ಸಂಖ್ಯೆಗೆ ತಾಳೆ ಆಗುತ್ತಿಲ್ಲ. ಎಷ್ಟೋ ಕಡೆಗಳಲ್ಲಿ ಹೆಸರು ಬದಲಾಗಿದೆ. ಮತ್ತೆ ಹಲವು ಕಡೆಗಳಲ್ಲಿ ತಪ್ಪಾಗಿ ಮುದ್ರಿತವಾಗಿದೆ.

ಈ ಬಗ್ಗೆ ರೈತರನ್ನು ಕೇಳಿದರೆ ಅವರ ತಂದೆ ಅಥವಾ ತಾತನ ಹೆಸರಿನಲ್ಲಿ ಪಂಪ್‌ಸೆಟ್ ಇದ್ದು, ಬದಲಾವಣೆ ಮಾಡಿಕೊಂಡಿರುವುದಿಲ್ಲ. ಸದ್ಯ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿದೆ. ಹಾಗಾಗಿ ಇದರ ಬಿಸಿ ತಟ್ಟದಿರಬಹುದು. ಮುಗಿದ ಅನಂತರ ತಾಳೆಯಾಗದ ರೈತರ ಸಬ್ಸಿಡಿಗೆ ಕತ್ತರಿ ಬೀಳಲಿದೆಯೇ ಎಂಬ ಆತಂಕ ಕಾಡತೊಡಗಿದೆ…

RELATED ARTICLES

Related Articles

TRENDING ARTICLES