Saturday, October 5, 2024

ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿ- ಸಂಸದ ಬೊಮ್ಮಾಯಿ

ರಾಜ್ಯ ಸರ್ಕಾರ ದಿವಾಳಿ ಆಗಿರೋದು ಪ್ರತಿಯೊಂದು ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಎಸ್​​ಸಿ, ಎಸ್​ಟಿಯವರ ಹಣ ಗ್ಯಾರಂಟಿ ಯೋಜನೆಗಳಿಗೆ 14 ಸಾವಿರ ಕೋಟಿ ವರ್ಗಾವಣೆ ಮಾಡಿದ್ದಾರೆ. ಎಸ್​​ಸಿ, ಎಸ್​ಟಿ ಜನಾಂಗಕ್ಕೆ ಸರ್ಕಾರ ಮೋಸ ಮಾಡುತ್ತಿದೆ. ಈ ಹಣ ಎಸ್​​ಸಿ, ಎಸ್​ಟಿ ಜನಾಂಗದ ಅಭಿವೃದ್ಧಿಗೆ ಬಳಕೆ ಆಗಬೇಕಿತ್ತು. ಆ ಎಲ್ಲಾ ಹಣ ಗ್ಯಾರಂಟಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಸ್​​ಸಿ, ಎಸ್​ಟಿ ಹಣ ಬಳಕೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ. ರಾಜಕಾರಣಕ್ಕಾಗಿ, ವೋಟಿಗಾಗಿ ಎಸ್​​ಸಿ, ಎಸ್​ಟಿ ಹಣ ದುರ್ಬಳಕೆ ಆಗುತ್ತಿದೆ. 25 ಸಾವಿರ ಕೋಟಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಖಜಾನೆ ಸುಭದ್ರವಾಗಿದೆ ಅಂತಾರೆ, ಹಾಗಾದ್ರೆ ಎಸ್​​ಸಿ, ಎಸ್​ಟಿಯವರ ಜೋಬಿಗೆ ಯಾಕೆ ಕೈ ಹಾಕಿದ್ದೀರಿ.

ಇದನ್ನು ಓದಿ; ಪ್ರತಿ 3 ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

ಇನ್ನು ಹಿಂದುಳಿದ ವರ್ಗಗಳಿಗೆ ಕಡಿಮೆ ಹಣ ಇಟ್ಟಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಅಂತಾ ಹೇಳುತ್ತಾರೆ. ಡೆಂಘೀ ಪ್ರಕರಣದಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಳ್ತಿಲ್ಲ. ಮಂತ್ರಿಗಳು ಕೇವಲ ಸಭೆ ಮಾಡುತ್ತಿದ್ದಾರೆ.ಚಿಕಿತ್ಸೆ ಸಿಗದಿದ್ದರೆ ಸಾವು ನೋವುಗಳಾಗುತ್ತದೆ, ಜನ ಪರದಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ.

ಹೌದು, ಡಿಹೆಚ್​ಓ ವರ್ಗಾವಣೆ ಮಾಡಬೇಕು. ಶಿಗ್ಗಾವಿ ಉಪಚುನಾವಣೆ ವಿಚಾರ ಅಶೋಕ‌ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಪಕ್ಷದಿಂದ ಸರ್ವೆ ಮಾಡಿಸುತ್ತಿದ್ದೇವೆ. ರಾಜಕೀಯವಾಗಿ ಬೆಳೆಯಲು ಶಿಗ್ಗಾವಿ ಜನರ ಆಶೀರ್ವಾದ ಕಾರಣವಾಗಿದೆ. ಧನ್ಯವಾದ ಯಾತ್ರೆ ಶಿಗ್ಗಾವಿಯಲ್ಲಿ ಮಾಡುತ್ತೇನೆ. ಜುಲೈ 12 ರಿಂದ ಯಾತ್ರೆ ಆರಂಭ ಮಾಡುತ್ತೇನೆ. ಒಂದುವರೆ ತಿಂಗಳುಗಳ‌ ಕಾಲ ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದೆ. ರಾಜ್ಯ ಸರ್ಕಾರಕ್ಕೆ ಜನಹಿತ ಮುಖ್ಯವಲ್ಲ ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES