Sunday, September 8, 2024

ಎಲ್.ಕೆ.ಅಡ್ವಾಣಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ; ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ ಸಾವನ್ನಪ್ಪಿದ್ದಾರೆ ಎಂದು ವದಂತಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಅವರು ಅಪೊಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

96 ವರ್ಷ ವಯಸ್ಸಿನ ಅಡ್ವಾಣಿ ಅವರು ವಯೋಸಹಜ ಸಮಸ್ಯೆಯಿಂದ ಎರಡು ದಿನಗಳ ಹಿಂದೆ ದೆಹಲಿಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿಟ್ಟು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ನಿನ್ನೆ ಸಂಜೆ ಡಿಸ್ಚಾರ್ಜ್ ಮಾಡಲಾಗಿತ್ತು. ಇದಕ್ಕೂ ಮುನ್ನ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನು ಓದಿ; ಮುಡಾ ಹಗರಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ: ಜಗದೀಶ್ ಶೆಟ್ಟರ್

1980ರಲ್ಲಿ ಜನತಾ ಪಕ್ಷದ ವಿಸರ್ಜನೆಯ ನಂತರ ಭಾರತೀಯ ಜನತಾ ಪಕ್ಷವನ್ನು ರಚಿಸಲಾಯಿತು. ಅಡ್ವಾಣಿ ಅದರ ಪ್ರಮುಖ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ಬಿಜೆಪಿಯ ಸಿದ್ಧಾಂತವನ್ನು ರೂಪಿಸುವಲ್ಲಿ ಮತ್ತು ಭಾರತದಾದ್ಯಂತ ಅದರ ನೆಲೆಯನ್ನು ವಿಸ್ತರಿಸುವಲ್ಲಿ ಅಡ್ವಾಣಿ ನಿರ್ಣಾಯಕ ಪಾತ್ರ ವಹಿಸಿದರು. 1990ರಲ್ಲಿ ರಾಮ ಮಂದಿರಕ್ಕಾಗಿ ರಾಷ್ಟ್ರವ್ಯಾಪಿ ರಥಯಾತ್ರೆ ಮಾಡಿದರು. 2002ರಿಂದ 2004ರವರೆಗೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದರು.

RELATED ARTICLES

Related Articles

TRENDING ARTICLES