Sunday, October 6, 2024

ಹರಿಯಾಣದ ಬಳಿ ಬಸ್​ ಪಲ್ಟಿ; 40 ಮಕ್ಕಳಿಗೆ ಗಂಭೀರ ಗಾಯ

ಹರಿಯಾಣ: ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿ 40 ಮಕ್ಕಳು ಗಾಯಗೊಂಡಿರುವ ಘಟನೆ ಹರ್ಯಾಣದ ಪಂಚಕುಲದ ಪಿಂಜೋರ್ ಬಳಿ ನಡೆದಿದೆ. ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿ 40 ಶಾಲಾ ಮಕ್ಕಳು ಮತ್ತು ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಸ್ತವವಾಗಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಇದೇ ಕಾರಣಕ್ಕೆ ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನಿಗೆ ಬಸ್ ನಿಯಂತ್ರಿಸಲು ಸಾಧ್ಯವಾಗದೆ ಬಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯಾದ್ಯಂತ ಇಂದು ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಪಿಂಜೋರ್ ಪಂಚಕುಲದ ಗುಡ್ಡಗಾಡು ಪ್ರದೇಶ ಇಲ್ಲಿನ ರಸ್ತೆಗಳು ಅಂಕುಡೊಂಕಾಗಿವೆ. ರಸ್ತೆಯ ದುಸ್ಥಿತಿಯೂ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಬಸ್ ತುಂಬಿತ್ತು ಮತ್ತು ಸುಮಾರು 70 ಮಕ್ಕಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ನಗರದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

RELATED ARTICLES

Related Articles

TRENDING ARTICLES