Sunday, October 6, 2024

ಜುಲೈ 10 ರಂದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಚಾಮರಾಜನಗರ: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸೆಡ್ಡು ಹೊಡೆದಿರುವ ಸಿಎಂ ಸಿದ್ದರಾಮಯ್ಯ, ಜುಲೈ 10 ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕೃತಜ್ಞತಾ ಸಮಾರಂಭ ನಡೆಯಲಿದೆ.

ಇದ್ದನ್ನು ಓದಿ: ತರಬೇತಿ ಪಡೆದ ಕರ್ನಾಟಕದ 9 ಆನೆಗಳು ಆಂಧ್ರ ಪದೇಶಕ್ಕೆ

ಜುಲೈ 10ರ ಬೆಳಗ್ಗೆ 11.10ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿರುವ ಸಿಎಂ, ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್​​​, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಸಂಸದ ಸುನಿಲ್ ಬೋಸ್ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಭಾಗಿಯಾಗಲಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳು ಆರು ತಿಂಗಳಿನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆನ್ನುವ ನಂಬಿಕೆ ಬಹು ಹಿಂದಿನ ಕಾಲದಿಂದಲೂ ಇತ್ತು. ಸಮಾಜವಾದಿ ತತ್ವಪಾಲಕರಾಗಿದ್ದ ಜೆ.ಹೆಚ್. ಪಟೇಲ್ ಆದಿಯಾಗಿ ಬಹುತೇಕ ಮುಖ್ಯಮಂತ್ರಿಗಳು ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡುವುದನ್ನು ತಪ್ಪಿಸಿದ್ದದ್ದು ಇದೇ ಕಾರಣಕ್ಕಾಗಿತ್ತು. ಆದರೆ ಈ ಮೂಢನಂಬಿಕೆ ಸಿಎಂ ಸಿದ್ದರಾಮಯ್ಯ ಎಳ್ಳು ನೀರು ಬಿಟ್ಟಿದ್ದಾರೆ. ಎರಡನೇ ಬಾರಿ ಸಿಎಂ ಆದ ಬಳಿಕ ನಾಲ್ಕನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆದ ತರುವಾಯ ಭೇಟಿ ನೀಡಿದ್ದ ಅವರು, ನಾನು 12 ಸಾರಿ ಚಾಮರಾಜನಗರಕ್ಕೆ ಹೋಗಿ 2ನೇ ಬಾರಿ ಸಿಎಂ ಆದೆ ಎಂದಿದ್ದರು.

 

RELATED ARTICLES

Related Articles

TRENDING ARTICLES