Saturday, July 13, 2024

‘ನಾನು ಬಾಸ್​​​ ಎನ್ನುವುದು ಇಬ್ಬರಿಗೆ ಮಾತ್ರ’-ನಟ ಸುದೀಪ್

ನಟ ಸುದೀಪ್ ಅವರು ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಯೂಟ್ಯೂಬ್ ಚಾನೆಲ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸುದೀಪ್ ಅವರು ಮಾತನಾಡಿದ್ದಾರೆ. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳಿಗೆ ನಟ ಸುದೀಪ್​ ಉತ್ತರಿಸಿದ್ದಾರೆ.. ಇನ್ನು ಸುದೀಪ್ ಅವರಿಗೆ ಯಾರು ಸ್ಫೂರ್ತಿ, ಅವರ ನೆಚ್ಚಿನ ಹೀರೋ ಯಾರು? ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

ಗೌರಿ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಅವರು ಕಿಚ್ಚ ಸುದೀಪ್‌ ಅವರಿಗೆ ಸಂದರ್ಶನ ಮಾಡಿದ್ದರು. ಇನ್ನು ಸಂದರ್ಶನದ ವೇಳೆ ಸಮರ್ಜಿತ್ ಲಂಕೇಶ್ ನನ್ನ ನೆಚ್ಚಿನ ಕಲಾವಿದರು ನೀವು, ನಿಮ್ಮ ನೆಚ್ಚಿನ ಕಲಾವಿದರು ಯಾರು? ಎಂದು ಕೇಳಿದ್ದಾರೆ.. ಇದಕ್ಕೆ ಸುದೀಪ್ ಅವರು ಉತ್ತರಿಸಿದ್ದಾರೆ. ನನ್ನ ಫೇವರಿಟ್ ಹೀರೋ ವಿಷ್ಣು ಸರ್. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ. ಜೀವನದಲ್ಲಿ ನಾನು ಇಬ್ಬರಿಗೆ ಮಾತ್ರ ಬಾಸ್ ಎಂದು ಕರೆದಿದ್ದು. ನಮ್ಮ ತಂದೆಗೆ, ಅದನ್ನು ಇವತ್ತಿಗೂ ಕರೆಯುತ್ತೇನೆ. ಹಾಗೂ ವಿಷ್ಣು ಸರ್​ಗೆ. ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್ ಎಂದಿದ್ದಾರೆ.

ಇದನ್ನು ಓದಿ: ಹಿಂಸಾಚಾರದಿಂದ ನಲುಗಿದ ಮಣಿಪುರಕ್ಕೆ ರಾಹುಲ್​​ ಗಾಂಧಿ ಭೇಟಿ

 

View this post on Instagram

 

A post shared by Baadshah 👑 (@karthikjanani__)

ಸದ್ಯ ನಟ ಕಿಚ್ಚ ಸುದೀಪ್ ಅವರು ಮ್ಯಾಕ್ಸ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನು ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಶೀಘ್ರವೇ ಈ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ಮಾಣ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.

RELATED ARTICLES

Related Articles

TRENDING ARTICLES