Sunday, October 6, 2024

ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಮೋದಿ

ನವದೆಹಲಿ: ಜುಲೈ 9 ರಂದು ನಡೆಯಲಿರುವ 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಭೇಟಿಯಾಗಲಿದ್ದಾರೆ. ಫೆಬ್ರವರಿ 24, 2022 ರಂದು ರಷ್ಯಾ ಮತ್ತು ಉಕ್ರೇನ್ ನಡುವೆ ಸಂಘರ್ಷ ಪ್ರಾರಂಭವಾದ ಬಳಿಕ ಮಾಸ್ಕೋಗೆ ಪ್ರಧಾನಿ ಮೋದಿ ಮೊದಲ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಅಳಿಯ ಪ್ರತಾಪ್​ಗೆ ಮಕ್ಕಳ ವಿಚಾರದಲ್ಲಿ ಕೊರಗಿತ್ತು: ಬಿ.ಸಿ.ಪಾಟೀಲ್​​

ಉಭಯ ನಾಯಕರು 2019ರಲ್ಲಿ ವ್ಲಾಡಿವೋಸ್ಟಾಕ್‌ನಲ್ಲಿ ಮತ್ತು 2022ರಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪರಸ್ಪರ ಭೇಟಿಯಾಗಿದ್ದರು. ಈ ಭೇಟಿಯೇ ಕೊನೆಯದ್ದಾಗಿತ್ತು. ಮಂಗಳವಾರ ಶೃಂಗ ಸಭೆ ಹಿನ್ನೆಲೆ ಸೋಮವಾರ ಸಂಜೆಯೇ ರಷ್ಯಾ ತಲುಪಿದ್ದಾರೆ.

ರಷ್ಯಾಕ್ಕೆ ತೆರಳುವ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ನನ್ನ ಸ್ನೇಹಿತ ವ್ಲಾಡಿಮಿರ್​​ ಪುಟಿನ್​​ ಅವರೊಂದಿಗೆ ದ್ವಿಪಕ್ಷೀಯ ಸಹಕಾರದ ಎಲ್ಲಾ ಅಂಶಗಳನ್ನು ಪರಿಶೀಲಿಸಲು, ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ದೃಷ್ಟಿಕೋನ ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದರು.

ಕಝಾಕಿಸ್ತಾನದ ಅಸ್ತಾನಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭಾಗವಹಿಸಿರಲಿಲ್ಲ.

 

RELATED ARTICLES

Related Articles

TRENDING ARTICLES