Sunday, October 6, 2024

ಹಿಂಸಾಚಾರದಿಂದ ನಲುಗಿದ ಮಣಿಪುರಕ್ಕೆ ರಾಹುಲ್​​ ಗಾಂಧಿ ಭೇಟಿ

ಇಂಫಾಲ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಭೇಟಿ ನೀಡಿದ್ದು, ಸಂತ್ರಸ್ತರ ಜೊತೆ ಸಂವಾದ ನಡೆಸಿದ್ದಾರೆ. ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಅಸ್ಸಾಂನ ನಿರಾಶ್ರಿತರ ಶಿಬಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ರಸ್ತೆ ಮೂಲಕ ಮಣಿಪುರದ ಜಿರಿಬಾಮ್‌ಗೆ ತೆರಳಿದ್ದಾರೆ.

ಇದನ್ನೂ ಓದಿ: ಜುಲೈ 10 ರಂದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ರಾಹುಲ್ ಗಾಂಧಿ ಜಿರಿಬಾಮ್‌ನಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ. ಈ ಮೂಲಕ ಕಷ್ಟದ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ. ಹಿಂಸಾಚಾರ ನಡೆದ ಬಳಿಕ ರಾಹುಲ್ ಮೂರನೇ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಇದು ಜನರ ಪರವಾಗಿ ಅವರ ಅಚಲ ಬದ್ಧತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಣಿಪುರದಲ್ಲಿ ಒಂದು ವರ್ಷದಿಂದ ಎರಡು ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದೆ. ಈ ಗಲಭೆಯಲ್ಲಿ 220ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿದ್ದಾರೆ. 60 ಸಾವಿರಕ್ಕೂ ಹೆಚ್ಚು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಣಿಪುರದ ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್​ ಆರೋಪಿಸುತ್ತಲೇ ಬಂದಿದೆ.

RELATED ARTICLES

Related Articles

TRENDING ARTICLES