Sunday, September 8, 2024

ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್​ ಬೆಂಕಿಗಾಹುತಿ!

ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜಧಾನಿ ಬೆಂಗಳೂರಿನಲ್ಲಿ ಅವಘಡ ಸಂಭವಿಸಿದೆ. ನಡುರಸ್ತೆಯಲ್ಲಿ ಬಿಎಂಟಿಸಿ ಬಸ್​ ಧಗಧಗನೆ ಉರಿದು ಬೆಂಕಿಗೆ ಆಹುತಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ನಗರದ ಎಂಜಿ ರಸ್ತೆಯ ಅನಿಲ್​ ಕುಂಬ್ಳೆ ಸರ್ಕಲ್​ ಬಳಿ ಇಂದು ಬೆಳಗ್ಗೆ ನೋಡ ನೋಡುತ್ತಿದ್ದಂತೆ ಬಿಎಂಟಿಸಿ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ತಕ್ಷಣ ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿದ ಚಾಲಕ ಬಸ್​ನಲ್ಲಿದ್ದವರನ್ನು ಕೆಳಗಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೆಎ57-ಎಫ್​ 1232 ಬಸ್​ ಬೆಂಕಿಗಾಹುತಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

RELATED ARTICLES

Related Articles

TRENDING ARTICLES