Tuesday, September 17, 2024

BMW ಕಾರು ಅಪಘಾತ: ಪರಾರಿಯಾಗಿದ್ದ ಚಾಲಕನ ಬಂಧನ

ಮುಂಬೈ: ಐಷಾರಾಮಿ ಬಿಎಂಡಬ್ಲ್ಯು ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 24 ವರ್ಷದ ಮಿಹಿರ್ ಶಾ ಬಂಧಿತ ವ್ಯಕ್ತಿ.

ಇದನ್ನೂ ಓದಿ: ರಾಮನಗರ, ಕನಕಪುರದಲ್ಲಿ ಮೆಡಿಕಲ್​ ಕಾಲೇಜು ನಿರ್ಮಾಣಕ್ಕಿಲ್ಲ ಅನುಮತಿ

ಶಿವಸೇನಾ ಪಕ್ಷದ ಸ್ಥಳೀಯ ಮುಖಂಡನ ಪುತ್ರ ಚಾಲನೆ ಮಾಡುತ್ತಿದ್ದ ಎನ್ನಲಾದ ಬಿಎಂಡಬ್ಲ್ಯು ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಹಿಳೆಯೋರ್ವಳು ಮೃತಪಟ್ಟಿದ್ದರು. ಮುಂಬೈನ ವರ್ಲಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿತ್ತು. ವರ್ಲಿ ಕೋಳಿವಾಡ ನಿವಾಸಿ ಕಾವೇರಿ ನಖವಾ (45) ತಮ್ಮ ಪತಿ ಪ್ರದೀಕ್ ನಖವಾ (50) ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಅನ್ನಿ ಬೆಸೆಂಟ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿತ್ತು. ಡಿಕ್ಕಿಯ ರಭಸಕ್ಕೆ ಕಾರು, ಮಹಿಳೆಯನ್ನು ಸುಮಾರು 2 ಕಿಮೀಗೂ ಹೆಚ್ಚು ದೂರದವರೆಗೆ ಎಳೆದೊಯ್ದಿತ್ತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರನ್ನು ಓಡಿಸುತ್ತಿದ್ದ 24 ವರ್ಷದ ಯುವಕನ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್​​​​ ಜಾರಿ ಮಾಡಿದ್ದರು. ಅಪಘಾತದ ನಂತರ ಮಿಹಿರ್​​ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಿಹಿರ್ ತಂದೆ ರಾಜೇಶ್ ಶಾ ಮತ್ತು ಅವರ ಚಾಲಕ ರಾಜೇಂದ್ರ ಸಿಂಗ್​ ಬಿಡಾವತ್​​ ಅವರನ್ನು ಪೊಲೀಸರು ಬಂಧಿಸಿದ್ದರು.

RELATED ARTICLES

Related Articles

TRENDING ARTICLES