Sunday, September 8, 2024

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಸಿಎಂಗೆ ಡಿಕೆಶಿ ಮನವಿ

ಬೆಂಗಳೂರು: ರಾಮನಗರವನ್ನು ಜಿಲ್ಲಾ ಕೇಂದ್ರವಾಗಿರಿಸಿ ರಾಮನಗರ ಜಿಲ್ಲೆಯನ್ನು ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಮನಗರ ಜಿಲ್ಲಾ ಉಸ್ತುವಾರಿ, ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ಡಿ.ಕೆ ಸುರೇಶ್ ಹಾಗೂ ಶಾಸಕ ಇಕ್ಬಾಲ್‌ ಹುಸೇನ್‌ ಮೊದಲಾದವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ವಿಧಾನಸೌಧದಲ್ಲಿ ಭೇಟಿಯಾಗಿದ್ದಾರೆ. ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿದ್ದಾರೆ.

ಇದನ್ನು ಓದಿ: 26 ಕುಟುಂಬದ ಅವಲಂಬಿತರಿಗೆ ಅನುಕುಂಪದ ನೌಕರಿ ನೀಡಿ: ಸಿಎಂ ಸೂಚನೆ

ಡಿಕೆಶಿ ನಿಯೋಗದ ಮನವಿ ಪತ್ರದಲ್ಲಿ ಏನಿದೆ? 

1986ಕ್ಕೂ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ 1986 ರಲ್ಲಿ ಘೋಷಿಸಲಾಯಿತು. ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟಿ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು.

RELATED ARTICLES

Related Articles

TRENDING ARTICLES