Thursday, September 19, 2024

ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ: ಸಿಎಂ ಖಡಕ್ ಸೂಚನೆ

ಬೆಂಗಳೂರು: ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದರು.

ಇದನ್ನೂ ಓದಿ: ಸ್ಥಿತಿವಂತರು ಹೊಂದಿರುವ ಬಿಪಿಎಲ್​ ಕಾರ್ಡ್​ ರದ್ದು: ಸಚಿವ ಕೆ.ಹೆಚ್​ ಮುನಿಯಪ್ಪ

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಖಡಕ್ ಸೂಚನೆ ನೀಡಿದರು.

ಅಪಘಾತಗಳ ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದು ಸೂಚನೆ ನೀಡಿದರು.

RELATED ARTICLES

Related Articles

TRENDING ARTICLES