Tuesday, September 17, 2024

ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಕಳೆದ ಎರಡು-ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತಂಪಾದ ವಾತಾವರಣವಿದ್ದು ಇಂದು ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಮಳೆ ಅಲರ್ಟ್ ಇದೆ.

ಇದನ್ನೂ ಓದಿ: ದರ್ಶನ್​ ಅಭಿಮಾನಿಗಳಿಗೆ ‘ಕಹಿ ಸುದ್ದಿ’, ಕರಾವಳಿ ಚಿತ್ರದಿಂದ ‘ದಾಸ’ ಔಟ್​!

ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನ ಮೋಡ ಕವಿದ ವಾತವರಣ ಮುಂದುವರಿದಿದೆ. ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ,  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಗರಿಷ್ಠ- 27°ಸಿ , ಕನಿಷ್ಠ 21° ತಾಪಮಾನವಿರಲಿದೆ.

ಸೋಮವಾರ ಬೆಂಗಳೂರಿನಾದ್ಯಂತ ಭಾರೀ ಮಳೆಯಾಗಿತ್ತು. ನಗರದ ಯಲಹಂಕ ಹಾಗೂ ದಾಸರಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಂದು ಕೂಡ ನಗರದಲ್ಲಿ ಮಳೆ ಸಾಧ್ಯತೆ ಇದೆ. ಜುಲೈ 12ರ ವರೆಗೆ ನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES