Friday, July 12, 2024

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ವಿಚಾರಣೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಎಸ್​​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸುಮಾರು ಆರು ಗಂಟೆಗೂ ಅಧಿಕ ಸಮಯ ನಾಗೇಂದ್ರರನ್ನು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮಹಾಮಾರಿ ಡೆಂಘೀಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್​​ ಡೆತ್ ನೋಟ್‌ ಬರೆದಿಟ್ಟು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರಿ ಸ್ವಾಮ್ಯದ ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅದರ ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಚಂದ್ರಶೇಖರನ್​ ಆರೋಪಿಸಿದ್ದರು. ಅಲ್ಲದೆ, ಕೆಲವು ಐಟಿ ಕಂಪನಿಗಳು ಮತ್ತು ಹೈದರಾಬಾದ್​​ ಮೂಲದ ಸಹಕಾರಿ ಬ್ಯಾಂಕ್‌ನ ವಿವಿಧ ಖಾತೆಗಳಿಗೆ 88.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರವು ಅದರ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿದ್ದರೆ, ಕೇಂದ್ರೀಯ ತನಿಖಾ ದಳವೂ ಏಕಕಾಲದಲ್ಲಿ ತನಿಖೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ
ಸಲ್ಲಿಸಿದ್ದರು.

RELATED ARTICLES

Related Articles

TRENDING ARTICLES