Sunday, September 8, 2024

2.5 ಕೋಟಿ ನಗದು ನಿರಾಕರಿಸಿದ ದ್ರಾವಿಡ್‌; ಕನ್ನಡಿಗನ ನಡೆಗೆ ಮೆಚ್ಚುಗೆ!

ಟೀಂ ಇಂಡಿಯಾದ ನಿರ್ಗಮಿತ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಮತ್ತೆ ಕ್ರೀಡಾ ಸಾರ್ಥಕತೆ ಮೆರೆದಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ 2.5 ಕೋಟಿ ರೂ. ಹಿಂದಿರುಗಿಸಿ, ಮಾದರಿಯಾಗಿದ್ದಾರೆ. ಸಹಾಯ ಕೋಚ್‌ ಸಿಬ್ಬಂದಿಯಂತೆ ತಾವೂ 2.5 ಕೋಟಿ ರೂ.ಗಳನ್ನು ಮಾತ್ರ ಪಡೆಯಲಿದ್ದು, ಉಳಿದ ಹಣವನ್ನು ಹಿಂತಿರುಗಿಸಿ ಸಮಾನತೆ ಸಾರಿದ್ದಾರೆ. ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರ ಈ ನಡೆಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಟಿ20 ವಿಶ್ವಕಪ್‌ ಗೆದ್ದ ಬೆನ್ನಲೇ ಬಿಸಿಸಿಐ ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನದಲ್ಲಿ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಆದ್ರೆ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ 5 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದ್ರೆ ರಾಹುಲ್‌ ದ್ರಾವಿಡ್‌ 2.5 ಕೋಟಿ ರೂ. ಹೆಚ್ಚುವರಿ ಹಣವನ್ನು ಹಿಂದಿರುಗಿಸಿ, ಎಲ್ಲ ಕೋಚಿಂಗ್‌ ಸಿಬ್ಬಂದಿ ಪಡೆದಷ್ಟೇ ಹಣವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ನಟ ಪ್ರಭುದೇವ ಅಜ್ಜಿ ನಿಧನ: ಮೈಸೂರಿನಲ್ಲಿ ಇಂದು ಅಂತ್ಯ ಕ್ರಿಯೆ

ಕಳೆದ ಜೂನ್‌ 29ರಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯಿತು. 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಎತ್ತಿ ಹಿಡಿದ ಭಾರತ ತಂಡ 20 ಕೋಟಿ ರೂ. ಬಹುಮಾನವನ್ನೂ ಬಾಚಿಕೊಂಡಿತು. ಈ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಣೆ ಮಾಡಿತ್ತು. ಜೊತೆಗೆ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಣೆ ಮಾಡಿದ್ರು.

 

RELATED ARTICLES

Related Articles

TRENDING ARTICLES