Tuesday, September 17, 2024

ಮಾಜಿ ಸಚಿವ ನಾಗೇಂದ್ರ ED ವಶಕ್ಕೆ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಮೈಸೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗು ಕಚೇರಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು ಇದೀಗ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ED ಅವರ ಕೆಲಸ ಅವರು ಮಾಡುತ್ತಾರೆ, ವಶಕ್ಕೆ ಪಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ, ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಇದನ್ನೂ ಓದಿ: ಮಾಜಿ ಸಚಿವ ಬಿ.ನಾಗೇಂದ್ರ ಹಾಗು ಶಾಸಕ ಬಸನಗೌಡ ದದ್ದಲ್ ನಿವಾಸದ ಮೇಲೆ ED ದಾಳಿ

ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರವಷ್ಟೇ ಬಸನಗೌಡ ದದ್ದಲ್​ ಎಸ್​ಐಟಿ ವಿಚಾರಣೆ ಎದುರಿಸಿದ್ದರು. ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳಿಂದ ಫ್ಲ್ಯಾಟ್​ನಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ನಾಗೇಂದ್ರ, ಬಸವರಾಜ್ ದದ್ದಲ್, ಸುಚಿ ಸ್ಮಿತಾ, ದೀಪಾ, ಕೃಷ್ಣಮೂರ್ತಿ ಇವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆದಿದೆ.

RELATED ARTICLES

Related Articles

TRENDING ARTICLES