Friday, July 12, 2024

ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಭೀತಿ ; ಸುಮೋಟೋ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳಕ್ಕೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ನ್ಯಾಯಾಲಯ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ಮುಖ್ಯ ನ್ಯಾ.ಎನ್.ವಿ ಅಂಜಾರಿಯಾ ನೇತೃತ್ವದ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಅಧಿಕಾರಿಗಳಿಗೆ ಪೀಠ ಕೆಲವು ಪ್ರಮುಖ ಪ್ರಶ್ನೆಗಳನ್ನು ಇಟ್ಟಿದೆ. ಈ ಪ್ರಶ್ನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರಿಸುವಂತೆ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: SSLC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31.02 ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜು.23ರ ಒಳಗೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

RELATED ARTICLES

Related Articles

TRENDING ARTICLES