Thursday, September 19, 2024

ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್ ನಿವಾಸಗಳ ಮೇಲೆ ED ದಾಳಿ

ರಾಯಚೂರು: ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರವಷ್ಟೇ ಬಸನಗೌಡ ದದ್ದಲ್​ ಎಸ್​ಐಟಿ ವಿಚಾರಣೆ ಎದುರಿಸಿದ್ದರು. ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ: ಸುನೀಲ್​ ಗವಾಸ್ಕರ್​ಗೆ ಇಂದು 75ನೇ ಜನ್ಮದಿನದ ಸಂಭ್ರಮ

ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳಿಂದ ಫ್ಲ್ಯಾಟ್​ನಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ನಾಗೇಂದ್ರ, ಬಸವರಾಜ್ ದದ್ದಲ್, ಸುಚಿ ಸ್ಮಿತಾ, ದೀಪಾ, ಕೃಷ್ಣಮೂರ್ತಿ ಇವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆದಿದೆ.

RELATED ARTICLES

Related Articles

TRENDING ARTICLES