Sunday, September 8, 2024

ಆನ್​ಲೈನ್​​ ಗೇಮ್​ ವ್ಯಾಮೋಹಕ್ಕೆ BE ವಿದ್ಯಾರ್ಥಿ ಆತ್ಮಹತ್ಯೆ

ಹುಬ್ಬಳ್ಳಿ; ಆನ್​ಲೈನ್​ ಗೇಮ್​ ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್​​ನಲ್ಲಿ ನಡೆದಿದೆ. ಇನ್ನು ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದುರ್ದೈವಿಯಾಗಿದ್ದಾನೆ.

ಹೌದು, ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್​ನಲ್ಲಿ ಓದುತ್ತಿದ್ದನು. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ನೆಲಸಿದ್ದನು. ರಾಕೇಶ್ ಪ್ರತಿದಿನವೂ ಆನ್​ಲೈನ್​ ಗೇಮ್​ ಆಡುತ್ತಿದ್ದನು.

ಇದನ್ನು ಓದಿ; ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

​ಆನ್​ಲೈನ್ ಗೇಮ್​ನಿಂದ ಹಣ ಕಳೆದುಕೊಂಡಿದ್ದ ರಾಕೇಶ್​ ಮನನೊಂದು ತಾನು ಇದ್ದ ಕೋಣೆಯ ಫ್ಯಾನ್​ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಹುಬ್ಬಳ್ಳಿಯ ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

RELATED ARTICLES

Related Articles

TRENDING ARTICLES