Tuesday, September 17, 2024

ತಮಿಳುನಾಡಿಗೆ ನಿತ್ಯ 1 TMC ನೀರು ಹರಿಸಲು CWRC ಸೂಚನೆ

ನವದೆಹಲಿ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸುವಂತೆ ಶಿಫಾರಸು ಮಾಡಲಾಗಿದೆ.

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಇದನ್ನೂ ಓದಿ: ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು. ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

RELATED ARTICLES

Related Articles

TRENDING ARTICLES