Sunday, September 8, 2024

ಜುಲೈ 13ರಿಂದ ರಾಜ್ಯದಲ್ಲಿ ವರುಣನ ಆರ್ಭಟ

ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಉತ್ತರ ಒಳನಾಡಿನಲ್ಲೂ ಮಳೆ ಶುರುವಾಗಿದೆ. ಜುಲೈ 13ರಿಂದ ಮೂರು ದಿನಗಳ ಕಾಲ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಶಿವಣ್ಣನ ಅಭಿಮಾನಿಗಳಿಗೆ ಕಹಿಸುದ್ದಿ: ನಾಳೆ ಜನ್ಮದಿನ ಆಚರಣೆಗೆ ಶಿವಣ್ಣ ಬ್ರೇಕ್​!

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆ ಇದೆ. HAL​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES