ಮೈಸೂರು: ಮುಡಾ ಗೆಬ್ಬೆದ್ದು ಹೋಗಿದೆ. ಅದನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಆದರೆ, ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನು ಸರಿಪಡಿಸುತ್ತೇನೆ ಎಂದು ಹೇಳಿದ್ರು.
ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರವಾಗಿ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಮ್ಮದು ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ ಎಂದರು. ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿಗೆ ಸೈಟ್ ಕೊಟ್ಟಿದ್ದು. ಅವರು ನನ್ನನ್ನು ಕೇಳಿ ಸೈಟ್ ಕೊಟ್ಟಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇದನ್ನೂ ಓದಿ: ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶುದ್ದ ಕುಡಿಯುವ ನೀರು ಇನ್ಮುಂದೆ 5 ಅಲ್ಲ 10 ರೂ.!
ಪತ್ನಿಗೆ ಸೈಟ್ ಹಂಚಿಕೆಯಾದಾಗ ನಾನು ವಿರೋಧ ಪಕ್ಷದ ನಾಯಕ. ನಾನು ಈಗ ವಿಪಕ್ಷ ನಾಯಕನನ್ನು ಕೇಳಿ ಕೆಲಸ ಮಾಡುತ್ತೇನಾ? ಮುಡಾ ತಪ್ಪು ಮಾಡಿ ನಂತರ ಪರಿಹಾರದ ಸೈಟ್ ಕೊಟ್ಟಿದೆ. ಭೂಮಿ ಕಳೆದುಕೊಂಡ ನಾವು ಪರಿಹಾರ ಪಡೆಯಬೇಕೋ ಬೇಡವೋ? ಈಗಲೂ ಅವರು ಕೊಟ್ಟಿರುವ ಸೈಟ್ ಅನ್ನು ವಾಪಸ್ ಪಡೆಯಲಿ. ಲೆಕ್ಕದ ಪ್ರಕಾರ ಬಡ್ಡಿ ಸೇರಿಸಿ 62 ಕೋಟಿ ರೂಪಾಯಿ ಪಾವತಿಸಲಿ ಎಂದಿದ್ದೇನೆ ಎಂದು ಹೇಳಿದ್ರು.