Sunday, September 8, 2024

ಪಂಚಭೂತಗಳಲ್ಲಿ ಲೀನವಾದ ನಿರೂಪಕಿ ಅಪರ್ಣಾ

ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿದೆ. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರವದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಹರಿದು ಬರುತ್ತಿರುವ ಭಕ್ತಗಣ

ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್‌, ತೇಜಸ್ವಿನಿ ಅನಂತಕುಮಾರ್, ರಮೇಶ್‌ ಅರವಿಂದ್‌, ವಿನಯ್‌ ರಾಜಕುಮಾರ್‌, ನಿರೂಪಕಿ ಶ್ವೇತಾ ಚೆಂಗಪ್ಪ, ಇಂದ್ರಜಿತ್‌ ಲಂಕೇಶ್‌, ಮಂಡ್ಯ ರಮೇಶ್‌, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.

ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು. ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದೆ.

RELATED ARTICLES

Related Articles

TRENDING ARTICLES