Sunday, September 8, 2024

ತಮಿಳುನಾಡಿಗೆ ನೀರು ಬಿಡಲ್ಲ ಎಂದ ಸಿಎಂ; ಜುಲೈ14ಕ್ಕೆ ಸರ್ವಪಕ್ಷ ಸಭೆ

ಬೆಂಗಳೂರು: ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಈ ಸಂಬಂಧ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಿದ್ದು, ಈ ಆದೇಶದ ವಿರುದ್ಧ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿನಿತ್ಯ 1ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನಿಯಂತ್ರಣ ಸಮಿತಿ ಆದೇಶ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಕಾವೇರಿ ನೀರಿನ ಸ್ಥಿತಿಗತಿ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದು, ಯಾವುದೇ ಕಾರಣಕ್ಕೂ ನೀರು ಬಿಡದಿರಲು ನಿರ್ಧರಿಸಲಾಗಿದೆ. ಅಲ್ಲದೇ ಕಾವೇರಿ ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಲ್ಲದೇ ಇದೇ ಜುಲೈ 14ರಂದು ಸರ್ವ ಪಕ್ಷಗಳ ಸಭೆ ಕರೆಯಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬಿಎಸ್​​​ವೈ ವಿರುದ್ಧ ಪೋಕ್ಸೋ ಕೇಸ್‌; ಜು.26ಕ್ಕೆ ಅರ್ಜಿ ವಿಚಾರಣೆ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡುವುದಕ್ಕೆ ಆಗುವುದಿಲ್ಲ. ಈ ಆದೇಶದ ವಿರುದ್ಧ ಅಪೀಲ್ ಹಾಕಬೇಕು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ. ನಾನು‌ ಹಾಗೂ ಎಲ್ಲಾ ಸಚಿವರು ಈ ನಿರ್ಧಾರ ಕೈಗೊಂಡಿದ್ದೇವೆ. ಜುಲೈ 14ರಂದು ಸರ್ವಪಕ್ಷಗಳ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಒಟ್ಟಾಗಿ ಇದರ ವಿರುದ್ದ ನಿಲ್ಲಬೇಕಾಗಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES