Sunday, September 8, 2024

ಚಾಮುಂಡಿ ಬೆಟ್ಟಕ್ಕೆ ಹರಿದು ಬರುತ್ತಿರುವ ಭಕ್ತಗಣ

ಮೈಸೂರು: ಮೈಸೂರಿನಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಇಂದು ಮುಂಜಾನೆ 5.30ರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ವಿವಿಧ ಪುಷ್ಪಗಳಿಂದ ದೇವಾಲಯ ಅಲಂಕಾರಗೊಂಡಿದೆ.

ಇದನ್ನೂ ಓದಿ: ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಅಲ್ಲದೇ ಬೆಟ್ಟಕ್ಕೆ ಬರರುವ ಭಕ್ತರಿಗೆ ಉಚಿತ KSRTC ಬಸ್‌ ವ್ಯವಸ್ಥೆ ಸಹ ನೀಡಲಾಗಿದೆ.. ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಶನಿವಾರ, ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ. ಆಷಾಢ ಮಾಸದ ನಾಲ್ಕು ಶುಕ್ರವಾರ, ಶನಿವಾರ ಹಾಗೂ ಭಾನುವಾರದಂದು ವಾಹನಗಳಿಗೆ ನಿಷೇಧವಿರುತ್ತದೆ.

ನಿಂಬೆ ಹಣ್ಣಿನ ಆರತಿ, ಬೆಲ್ಲದಾರತಿ ಸೇರಿದಂತೆ ಹಲವು ಬಗೆಯ ಹರಕೆಗಳನ್ನು ಭಕ್ತಾದಿಗಳು ತೀರಿಸಿ ಕೈ ಮುಗಿದರು. ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಪಾಸ್ ವ್ಯವಸ್ಥೆ ರದ್ದು ಮಾಡಲಾಗಿದೆ. ಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೇವೆ, ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಪ್ರಸಾದ ವಿತರಿಸುವುದಕ್ಕೆ ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಅನುಮತಿ ಪತ್ರ ಪಡೆಯಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧಿಸಲಾಗಿದೆ. ಜನರು ಸರತಿ ಸಾಲಿನಲ್ಲಿ ದೇಗುಲ ಪ್ರವೇಶಿಸಲು ಬ್ಯಾರಿಕೇಡ್? ಅಳವಡಿಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ..

RELATED ARTICLES

Related Articles

TRENDING ARTICLES