Sunday, September 8, 2024

ನಿರೂಪಕಿ ಅಪರ್ಣಾ ವಸ್ತಾರೆ ಕ್ಯಾನ್ಸರ್​ನಿಂದ ನಿಧನ!

ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್​​ನಿಂದ 57ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದಾರೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು.

ಅಪರ್ಣಾ ವಸ್ತಾರೆ ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು, ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಅಪರ್ಣಾ ಕೊನೆಯುಸಿರೆಳಿದ್ದಾರೆ. ಅವರು ಪತಿ ನಾಗರಾಜ್​ ವಸ್ತಾರೆ ಯವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಸೇರಿದಂತೆ ಚಿತ್ರರಂಗದ ಅನೇಕ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

ಇಂದು ಬೆಳಗ್ಗೆ 11:30ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,  ವೈದಿಕ ಸಂಪ್ರದಾಯದಂತೆ ಮಧ್ಯಾಹ್ನ 1 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಪರ್ಣಾ ಅಂತ್ಯಕ್ರಿಯೆ ನಡೆಯಲಿದೆ.

2 ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಇದನ್ನೂ ಓದಿ: ನಟಿ ಸೋನಾಲ್ ಜೊತೆ ತರುಣ್ ಸುಧೀರ್ ಮದುವೆ

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.

ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಕೇಳಿಬರುವ ಪ್ರಯಾಣಿಕರ ಸೂಚನೆಗಳಿಗೆ ಅಪರ್ಣಾ ಧ್ವನಿ ನೀಡಿದ್ದರು. ಆ ಮೂಲಕ ಅವರು ಜನರಿಗೆ ಇನ್ನಷ್ಟು ಹತ್ತಿರ ಆಗಿದ್ದರು. ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

RELATED ARTICLES

Related Articles

TRENDING ARTICLES