Sunday, September 8, 2024

ಸತ್ಯಮೇವ ಜಯತೇ : ಪವರ್​ ಟಿವಿ ಪ್ರಸಾರಕ್ಕೆ ಸುಪ್ರೀಂಕೋರ್ಟ್​​​ ಗ್ರೀನ್​ಸಿಗ್ನಲ್​

ಪವರ್ ಟಿವಿ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸತ್ಯಕ್ಕೆ ಜಯ ಸಿಕ್ಕಿದೆ. ಜೆಡಿಎಸ್ ನಾಯಕರಾದ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತಾಗಿ ಪವರ್ ಟಿವಿ ನಿರಂತರವಾಗಿ ಸಮಗ್ರ ವರದಿಗಳನ್ನ ಪ್ರಕಟ ಮಾಡುತ್ತಿತ್ತು. ಇದರ ಬೆನ್ನಲ್ಲೇ ಪವರ್ ಟಿವಿ ತನ್ನ ಪರವಾನಗಿಯನ್ನ 2021ರಿಂದ ನವೀಕರಣ ಮಾಡಿಕೊಂಡಿಲ್ಲ ಎಂದು ಆಪಾದಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ, ಹೈಕೋರ್ಟ್‌ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಸುಪ್ರೀಂ ಕೋರ್ಟ್ ತೆರವು ಮಾಡಿದೆ.

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನೋ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನವಾದ ನಿರೂಪಕಿ ಅಪರ್ಣಾ

ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಸಾರಥ್ಯದ ಪೀಠವು, ಈ ವಿಚಾರದ ಕುರಿತಾಗಿ ನಾವು ಇನ್ನೇನೂ ಕೇಳಲು ಬಯಸೋದಿಲ್ಲ. ಇದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ. ಅವರ ದನಿಯನ್ನು ಸಂಪೂರ್ಣವಾಗಿ ಕುಗ್ಗಿಸುವ  ಉದ್ದೇಶವಾಗಿತ್ತು. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹಿಡಿಯಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.

RELATED ARTICLES

Related Articles

TRENDING ARTICLES